ಉಡುಪಿ ಜಿಲ್ಲೆ:ಎಲ್ಲೆಲ್ಲಿ ಲಭ್ಯವಿರಲಿದೆ ಗರೀಬ್ ಕಲ್ಯಾಣ ಅನ್ನ ಯೋಜನೆಯ ಆಹಾರಧಾನ್ಯ?

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ -19 ಹರಡುತ್ತಿರುವ ಹಿನ್ನೆಲೆಯಲ್ಲಿ ಎನ್.ಎಫ್.ಎಸ್.ಎ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಬಿಡುಗಡೆಯಾದ ಆಹಾರಧಾನ್ಯವನ್ನು ಪ್ರಸಕ್ತ ಸಾಲಿನ ಮೇ ಮತ್ತು ಜೂನ್ ತಿಂಗಳಲ್ಲಿ ಫಲಾನುಭವಿಗಳಿಗೆ ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ವಿತರಿಸುವ ಪ್ರಮಾಣದ ವಿವರ ಹೀಗಿದೆ. ಜಿಲ್ಲೆಯಲ್ಲಿರುವ ಅಂತ್ಯೋದಯ (ಎ.ಎ.ವೈ) ಯೋಜನೆಯ 28,422 ಪಡಿತರ ಚೀಟಿದಾರರಿಗೆ ಉಚಿತವಾಗಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯನ್ನು ಪ್ರತಿ ಸದಸ್ಯರಿಗೆ ವಿತರಿಸಲಾಗುತ್ತದೆ. ಆದ್ಯತಾ (ಬಿ.ಪಿ.ಎಲ್) […]