ಮಸೀದಿಗಳಲ್ಲಿ ನಮಾಝ್ ವೇಳೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕರೆ
ಉಡುಪಿ: ರಾಜ್ಯ ಸರಕಾರವು ಜುಲೈ 5 ರಿಂದ ಧಾರ್ಮಿಕ ಕೇಂದ್ರಗಳಲ್ಲಿ ಆರಾಧನಾ ಚಟುವಟಿಕೆಗಳನ್ನು ಆರಂಭಿಸಲು ಅನುಮತಿ ನೀಡಿದೆ. ಆದರೂ ಕೊರೊನಾ ಮಹಾಮಾರಿಯಿಂದ ನಾವು ಸಂಪೂರ್ಣವಾಗಿ ಮುಕ್ತರಾಗಿಲ್ಲ. ಇದನ್ನು ಗಮನದಲ್ಲಿರಿಸಿಕೊಂಡು ಸರಕಾರದ ಆದೇಶದಂತೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಮಸೀದಿಗಳಲ್ಲಿ ನಮಾಝ್ ಮಾಡುವಂತೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಇಬ್ರಾಹಿಂ ಸಾಹೇಬ್ ಕೋಟ ಕರೆನೀಡಿದ್ದಾರೆ. ಮಸೀದಿಗಳಲ್ಲಿ ದೈಹಿಕ ಅಂತರವನ್ನು ಕಾಯ್ದುಕೊಂಡು ಮತ್ತು ಮಾಸ್ಕ್ ಧಾರಣೆಯನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಮಸೀದಿಗಳನ್ನು ತೆರೆಯಬೇಕು. ಆ ಮೂಲಕ ಕೋವಿಡ್ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ, […]