ನಾಳೆ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಉಡುಪಿ ಜಿಲ್ಲಾ ಕಚೇರಿ ಉದ್ಘಾಟನಾ ಸಮಾರಂಭ

ಉಡುಪಿ: ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ, ಉಡುಪಿ ಜಿಲ್ಲೆ ಇದರ ಜಿಲ್ಲಾ ಕಚೇರಿ ಉದ್ಘಾಟನಾ ಸಮಾರಂಭ ಏಪ್ರಿಲ್ 4ರ ಭಾನುವಾರದಂದು ಸಂಜೆ 3.30ಕ್ಕೆ ಆದಿಉಡುಪಿಯ ರೀಗಲ್ ನೆಕ್ಸ್ಟ್ ಕಮರ್ಷಿಯಲ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನಡೆಯಲಿದೆ. ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಕರ್ನಾಟಕ ಸಂಸ್ಥಾಪಕ ಅಧ್ಯಕ್ಷ ಸುರೇಶ್ ಗೋಕಾಕ್ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ,   ಉಡುಪಿ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ […]