ಆಗಸ್ಟ್ 25 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲೆ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ

ಉಡುಪಿ: ಜಿಲ್ಲಾಡಳಿತ ಉಡುಪಿ ಇವರ ವತಿಯಿಂದ ಉಡುಪಿ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಆಗಸ್ಟ್ 25 ರಂದು ಸಂಜೆ 5 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದು, ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಉಡುಪಿ ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮದ ಲಾಂಛನವನ್ನು ಶಾಸಕ ಕೆ.ರಘುಪತಿ ಭಟ್ ಹಾಗೂ ವೆಬ್‌ಸೈಟ್‌ನ್ನು ಶಾಸಕ ಲಾಲಾಜಿ ಆರ್ ಮೆಂಡನ್ ಅವರು ಸೋಮವಾರ ರಜತಾದ್ರಿಯ […]