ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸುವ ಯೋಜನೆ ಶೀಘ್ರದಲ್ಲೇ ಅನುಷ್ಠಾನ: ಶಾಸಕ ರಘುಪತಿ ಭಟ್
ಉಡುಪಿ: ಇಲ್ಲಿನ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸುವ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದ್ದು, ಸಚಿವ ಸಂಪುಟ ಸಭೆಯ ಒಪ್ಪಿಗೆಯಷ್ಟೇ ದೊರೆಯಬೇಕಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯವನ್ನು ಮಂಡಿಸಿ ಒಪ್ಪಿಗೆ ಪಡೆದು ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ. ಉಡುಪಿ ಜಿಲ್ಲಾಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಸಂಬಂಧ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಿರುವಂತೆ ಹಾಗೂ ಈ ಹಿಂದೆ ಮುಖ್ಯಮಂತ್ರಿಯವರು ಆಯವ್ಯಯದ ಮೇಲೆ ಉತ್ತರಿಸುವಾಗ ನಮ್ಮ ಬೇಡಿಕೆಯಂತೆ ಉಡುಪಿ ಜಿಲ್ಲಾಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಭರವಸೆಯನ್ನು ನೀಡಿರುತ್ತಾರೆ. ಅದರಂತೆ ಉಡುಪಿ […]