ಉಡುಪಿ: ನಾಳೆ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ

ಉಡುಪಿ: ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಜನವರಿ 26 ರಂದು ಬೆಳಗ್ಗೆ 9 ಗಂಟೆಗೆ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ […]