ಉಡುಪಿ: ರಾಷ್ಟ್ರೀಯ ಸ್ವಯಂ ಸೇವಾ ಸಂಘದಿಂದ ದೀಪಾವಳಿ ಆಚರಣೆ

ಉಡುಪಿ: ಉಡುಪಿ ನಗರದ ಸಮೀಪ ಬೀಡಿನಗುಡ್ಡೆಯಲ್ಲಿರುವ ಹರಿಜನ ಕಾಲೊನಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಆಶ್ರಯದಲ್ಲಿ ವಿಶೇಷ ರೀತಿಯಲ್ಲಿ ದೀಪಾವಳಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಕಾಲೊನಿಯ ಹತ್ತಾರು ಮನೆಗಳಿಗೆ ಸ್ವಯಂ ತೆರಳಿ ಹಣತೆ ದೀಪ ಬೆಳಗಿ ಮನೆಯ ಸದಸ್ಯರ ಜೊತೆ ಉಭಯ ಕುಶಲೋಪರಿ ನಡೆಸಿ ಬೆಳಕಿನ ಹಬ್ಬದ ಆಶೀರ್ವಾದಗೈದರು. ಬಳಿಕ ಅಲ್ಲಿನ ಪ್ರಾರ್ಥನಾ ಮಂದಿರಕ್ಕೆ ಭೇಟಿ ನೀಡಿ ದೇವರ ಸಾಲಂಕೃತ ಭಾವಚಿತ್ರಗಳಿಗೆ ಮಂಗಳಾರತಿ ಬೆಳಗಿ, ಕಾಲೊನಿ ನಿವಾಸಿಗಳು ಅರ್ಪಿಸಿದ ಭಕ್ತಿ […]