ಜೂನ್ 1: ಉಡುಪಿ, ದ.ಕ. ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಪುನಾರಂಭ: ಶೇ.15ರಷ್ಟು ಬಸ್ ದರ ಹೆಚ್ಚಳ
ಉಡುಪಿ: ಕೊರೊನಾ ಲಾಕ್ ಡೌನ್ ನಿಂದಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಸ್ಥಗಿತಗೊಂಡಿದ್ದ ಖಾಸಗಿ ಬಸ್ ಗಳ ಸಂಚಾರ ಜೂನ್ 1ರಿಂದ ಮತ್ತೆ ಪುನಾರಂಭವಾಗಲಿದೆ. ಇಂದು ಉಡುಪಿ ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೆನರಾ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಮಾಹಿತಿ ನೀಡಿದರು. ಸರ್ಕಾರದ ಆದೇಶದಂತೆ ಸದ್ಯ ಬೆಳಿಗ್ಗೆ 7ರಿಂದ ಸಂಜೆ 7 ಗಂಟೆಯವರೆಗೆ ಬಸ್ ಸಂಚಾರ ಇರಲಿದೆ. ಸರ್ಕಾರದ ಎಲ್ಲ ಆದೇಶಗಳನ್ನು ಪಾಲಿಸಿಕೊಂಡು ಬಸ್ ಓಡಿಸಲಾಗುತ್ತದೆ […]