ಉಡುಪಿ:ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಬಲಿ ಉತ್ಸವ ಸಂಪನ್ನ

ಉಡುಪಿ: ಉಡುಪಿ ದೊಡ್ಡಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ವಿಜಯ ದಶಮಿಯ ಪರ್ವಕಾಲದಲ್ಲಿ ಬಲಿ ಉತ್ಸವವು ಕ್ಷೇತ್ರದ ಧರ್ಮದ ಶ್ರೀ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಸರ್ವೇಶ ತಂತ್ರಿಗಳ ತಂತ್ರತ್ವ ದಲ್ಲಿ ಸಂಪನ್ನಗೊಂಡಿತು.. ಸಂಜೆ ಆರಾಧನಾ ರಂಗ ಪೂಜೆಯ ಬಳಿಕ ಬಲಿ ಉತ್ಸವ ಆರಂಭಗೊಂಡಿತು.. ಬಲಿ ಉತ್ಸವದಲ್ಲಿ ಶ್ರೀ ಕ್ಷೇತ್ರದ ವಿಶೇಷ ಸೇವೆಯಾದ ನೃತ್ಯ ಸುತ್ತು ವಿಶೇಷ ಆಕರ್ಷಣೆಯಾಗಿತ್ತು. ಪಲ್ಲಕ್ಕಿ ಉತ್ಸವ ವಸಂತ ಪೂಜೆ ನೆರವೇರಿತು. […]