ದೊಡ್ಡಣಗುಡ್ಡೆಯ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ತಪ್ಪಿದ ಭಾರೀ ದುರಂತ

ಉಡುಪಿ: ದೊಡ್ಡಣಗುಡ್ಡೆ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಮೂರು ಮಂದಿ ಹೊರಗೆ ಓಡಿಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ನವೀಕರಣ ಕಾಮಗಾರಿ ನಡೆಯುತ್ತಿದ್ದು, ರೋಗಿಗಳು ಯಾರು ಇರಲಿಲ್ಲ. ಇದರಿಂದ ಭಾರೀ‌ ಅನಾಹುತವೊಂದು ತಪ್ಪಿದಂತಾಗಿದೆ. ತಕ್ಷಣವೇ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ‌ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.