ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಜೋಡಿ ಲಲಿತ ಸಹಸ್ರ ಕದಳಿಯಾಗ ಸಂಪನ್ನ

ಉಡುಪಿ: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಲಲಿತಾ ಪಂಚಮಿಯ ಪರ್ವಕಾಲದಲ್ಲಿ ಜೋಡಿ ಲಲಿತಾ ಸಹಸ್ರ ಕದಳಿಯಾಗ ಸಂಪನ್ನಗೊಂಡಿತು.. ದಕ್ಷಿಣ ಭಾರತದಲ್ಲಿ ಅತಿ ಎತ್ತರವಾದ ಮೇರು ಶ್ರೀ ಚಕ್ರವನ್ನು ಹೊಂದಿರುವ ಶ್ರೀ ಕ್ಷೇತ್ರದಲ್ಲಿ ಶ್ರೀ ಚಕ್ರಪಿಟಾರೂಢಳಾದ ರಾಜರಾಜೇಶ್ವರಿಗೆ ಸಲ್ಲಿಕೆಯಾಗುವ ಮಹಾನ್ ಯಾಗವೇ ಲಲಿತ ಸಹಸ್ರ ಕದಳಿಯಾಗ… ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಕದಳಿಹಣ್ಣನ್ನು ತ್ರಿಮದುರಯುಕ್ತವಾಗಿ ಹೋಮಿಸಿ ಶ್ರೀ ಲಲಿತಾಂಬಿಕೆಯನ್ನು ಸಹಸ್ರನಾಮಗಳಿಂದ ಸ್ತುತಿಸಿ ವಿಧವಿಧ ಕುಸುಮಗಳಿಂದ ಅರ್ಜಿಸಿ ಬಗೆ ಬಗೆಯ ಆರತಿಯನ್ನು […]