ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಪ್ರಸನ್ನ ಪ್ರತಿಷ್ಠೆ ಮಹಾಚಂಡಿಕಾಯಾಗ ಸಂಪನ್ನ

ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಗಾಯತ್ರಿ ಧ್ಯಾನಪೀಠದಲ್ಲಿ ಕಪಿಲ ಮಹರ್ಷಿಗಳ ಸನ್ನಿಧಾನದಲ್ಲಿ ಪರಿವಾರ ಶಕ್ತಿಯಾಗಿ ಶ್ರೀ ಪ್ರಸನ್ನ ಪ್ರತಿಷ್ಠಾಪನೆಯೂ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು.ಆದ್ಯ ಗಣಪತಿಯಾಗ ಪಂಚವೀಂಶತಿ ಕಲಾಶಾರಾಧನೆ ಪ್ರತಿಷ್ಠಾ ಪ್ರಧಾನ ಹೋಮಗಳು ಸಂಪನ್ನಗೊಂಡವು.ಗತಕಾಲದಲ್ಲಿ ಕ್ಷೇತ್ರ ರಚನೆಗೆ ಕಾರಣೀಭೂತರಾಗಿ ತಪಸ್ಸನ್ನ ಆಚರಿಸಿದ ಶ್ರೀ ಕಪಿಲ ಮಹರ್ಷಿಗಳ ಸಾನಿಧ್ಯದಲ್ಲಿ ನವಕ ಕಲಶ ಪ್ರಧಾನ ಹೋಮ […]