ಮೈತ್ರಿ ಅಭ್ಯರ್ಥಿಗಳ ಗೆಲುವು ಖಚಿತ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ವಿಶ್ವಾಸ.

ಶಿಕಾರಿಪುರ: ಮೈತ್ರಿಯೊಂದಿಗೆ ಬಿಜೆಪಿ ಅಭ್ಯರ್ಥಿಯಾಗಿ ನೈರುತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಎಸ್.ಎಲ್.ಭೋಜೇಗೌಡ್ರು ಸ್ಪರ್ಧೆ ಮಾಡಿದ್ದು, ವಾತಾವರಣ ಮೈತ್ರಿ ಅಭ್ಯರ್ಥಿಗಳ ಪರವಾಗಿದ್ದು, ಇಬ್ಬರ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಹೇಳಿದರು. ಇಲ್ಲಿನ ತಾಲ್ಲೂಕು ಬಿಜೆಪಿ ಕಛೇರಿಯಲ್ಲಿ ಬುಧವಾರ ಬೆಳಗ್ಗೆ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಜೆಡಿಎಸ್ ಮೈತ್ರಿಯೊಂದಿಗೆ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಇನ್ನೆರಡು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ ಮಾಡುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆಯಂತೆ ಈ ಚುನಾವಣೆಯಲ್ಲಿಯೂ ಮೈತ್ರಿಯೊಂದಿಗೆ […]