Tag: #Udupi #Dr.dayanand sarji #Sollution #For Unemployment #BJP candidate #Yashpal suvarna
-
ನಿರುದ್ಯೋಗ ಸಮಸ್ಯೆ ನಿವಾರಣೆಗೆ ಪ್ರಯತ್ನ: ಡಾ|ಧನಂಜಯ ಸರ್ಜಿ
ಉಡುಪಿ: ಪ್ರತಿ ವರ್ಷ ರಾಜ್ಯದಲ್ಲಿ 2 ಲಕ್ಷ ಯುವತಿಯರು, 1.70 ಲಕ್ಷ ಯುವಕರು ಪದವಿ ಪಡೆಯುತ್ತಿದ್ದು, ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕೌಶಲ್ಯಕೇಂದ್ರಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಹೆಚ್ಚಿನ ಉದ್ಯೋಗಾವಕಾಶಗಳನ್ನು ದೊರಕಿಸಿಕೊಡಲು ಪ್ರಯತ್ನಿಸಲಾಗುವುದು ಎಂದು ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಆರೋಗ್ಯ ಕ್ಷೇತ್ರದಲ್ಲಿ ಅನೇಕ ಸುಧಾರಣೆಗಳ ಅಗತ್ಯವಿದೆ. ಅನುದಾನಿತ ಶಾಲಾ ಶಿಕ್ಷಕರಿಗೂ ಜ್ಯೋತಿ ಸಂಜೀವಿನಿ ಯೋಜನೆಯನ್ನು ವಿಸ್ತರಿಸಬೇಕು ಸರ್ಕಾರಿ ನೌಕರರಿಗೂ ಖಾಸಗಿ ಆಸ್ಪತ್ರೆಗಳಲ್ಲೂ ಉನ್ನತ ಚಿಕಿತ್ಸಾ ಸೌಲಭ್ಯಗಳು ಲಭಿಸಬೇಕು. ಇಎಸ್‌ಐ ಮಿತಿಯನ್ನು…