ಉಡುಪಿ ಜಿಲ್ಲೆಯಲ್ಲಿ ಶೀಘ್ರದಲ್ಲಿ ಸರ್ಕಾರಿ ಕೋವಿಡ್ ಪರೀಕ್ಷಾ ಲ್ಯಾಬ್ ಆರಂಭ: ಸಚಿವ ಡಾ. ಸುಧಾಕರ್

ಉಡುಪಿ ಜೂನ್ 3: ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಅತ್ಯಂತ ಶೀಘ್ರದಲ್ಲಿ ಸರ್ಕಾರಿ ಕೋವಿಡ್ -19 ಪರೀಕ್ಷಾ ಲ್ಯಾಬ್ ಆರಂಭಗೊಳ್ಳಲಿದ್ದು, ಈ ಕುರಿತಂತೆ  ನೂತನ ಲ್ಯಾಬ್ ನಿರ್ಮಾಣ ಕಾಮಗಾರಿಗಳು ಅಂತಮ ಹಂತದಲ್ಲಿವೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು. ಅವರು ಬುಧವಾರ, ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಕೋವಿಡ್-19 ಹಿನ್ನಲೆಯಲ್ಲಿ  ಜಿಲ್ಲೆಯ ಜನಪ್ರತಿನಿಧಿಗಳು  ಮತ್ತು ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ […]