ಉಡುಪಿ:ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರು ಒದಗಿಸುವ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಆದ್ಯತೆಯ ಮೇಲೆ ಕೈಗೊಳ್ಳಿ : ಆಶೀಶ್ ಕುಂದಾಲ್

ಉಡುಪಿ: ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ನಿರಂತರ ಶುದ್ಧ ಕುಡಿಯುವ ನೀರು ಒದಗಿಸುವ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗಧಿತ ಕಾಲಾವಧಿಯ ಒಳಗೆ ಅದ್ಯತೆಯ ಮೇಲೆ ಕೈಗೊಂಡು ಶುದ್ಧ ನೀರನ್ನು ಒದಗಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಕೇಂದ್ರ ಜಲ ಜೀವನ್ ಮಿಷನ್ ಯೋಜನೆಯ ನೋಡೆಲ್ ಅಧಿಕಾರಿ ಆಶೀಶ್ ಕುಂದಾಲ್ ಅವರುಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದರು. […]