ಉಡುಪಿ ಜಿಲ್ಲೆಯಲ್ಲಿ ಡ್ರಗ್ಸ್ ಕೇಸ್ ಹೆಚ್ಚುತ್ತಿರುವುದು ಆತಂಕದ ವಿಚಾರ- ಎಸ್ಪಿ‌ ಹರಿರಾಮ್ ಶಂಕರ್

ಉಡುಪಿ: ಕರ್ನಾಟಕ ರಾಜ್ಯದಲ್ಲಿ ಬೆಂಗಳೂರು ಸಿಟಿಯಲ್ಲಿ ಅತೀ ಹೆಚ್ಚು ಡ್ರಗ್ಸ್ ಕೇಸ್ ಪತ್ತೆಯಾಗುತ್ತಿದೆ. ನಂತರದ ಸ್ಥಾನದಲ್ಲಿ‌ ಮಂಗಳೂರು ಸಿಟಿ ಇದೆ. ಮೂರನೇ ಸ್ಥಾನದಲ್ಲಿ ಉಡುಪಿ ಜಿಲ್ಲೆ ಇದೆ. ಇದು ನಿಜಕ್ಕೂ ಆತಂಕದ ವಿಚಾರ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಕಳವಳ ವ್ಯಕ್ತಪಡಿಸಿದರು. ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬನ್ನಂಜೆ ನಾರಾಯಣಗುರು ಸಭಾಂಗಣದಲ್ಲಿ ಗುರುವಾರ ನಡೆದ ಶಾಲಾ ಕಾಲೇಜುಗಳಲ್ಲಿ ಮಾದಕದ್ರವ್ಯ ವಿರೋಧಿ ಮತ್ತು ಜಾಗೃತಿ ಸಮಿತಿ ರಚನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ […]