ಸಂಭ್ರಮದ ‘ಉಡುಪಿ ಉಚ್ಚಿಲ ದಸರಾ’ಕ್ಕೆ ಕ್ಷಣಗಣನೆ; ಮಧುವಣಗಿತ್ತಿಯಂತೆ ಶೃಂಗಾರಗೊಂಡ ಉಚ್ಚಿಲ

ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಅಡಳಿತದ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಳದಲ್ಲಿ ನವರಾತ್ರಿ ಉತ್ಸವವದ ಪ್ರಯುಕ್ತ ಅ. 3ರಿಂದ 12ರವರೆಗೆ ನಡೆಯಲಿರುವ 3ನೇ ವರ್ಷದ ‘ಉಡುಪಿ ಉಚ್ಚಿಲ ದಸರಾ’ಕ್ಕೆ ಭರದ ಸಿದ್ಧತೆ ಕೈಗೊಳ್ಳಲಾಗಿದ್ದು, ಕ್ಷಣಗಣನೆ ಆರಂಭವಾಗಿದೆ.ಶಿಸ್ತುಬದ್ಧವಾಗಿ, ಸಂಪ್ರದಾಯಿಕವಾಗಿ ಹಾಗು ವಿಭಿನ್ನವಾದ ಸಾಂಸ್ಕೃತಿಕ ವೈಭವದೊಂದಿಗೆ ‘ಉಡುಪಿ ಉಚ್ಚಿಲ ದಸರಾ’ವನ್ನು ಆಚರಿಸಲು ದಸರಾ ರೂವಾರಿ, ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಜಿ. ಶಂಕರ್ ನೇತೃತ್ವದಲ್ಲಿ ಅಂತಿಮ ತಯಾರಿ ನಡೆಸಲಾಗಿದೆ. ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚು […]