‘ದ್ವಮ್ದ್ವ’ ಕನ್ನಡ ಕಲಾತ್ಮಕ ಚಿತ್ರ ಬಿಡುಗಡೆ -ಪತ್ರಕರ್ತರಿಗೆ ವಿಶೇಷ ಪ್ರದರ್ಶನ

ಉಡುಪಿ: ಯಕ್ಷಗಾನದಲ್ಲಿನ ಹೆಣ್ಣಿನ ಪಾತ್ರಕ್ಕೆ ಸಂಬಂಧಿಸಿದ ಕಥಾ ಹಂದರ ಹೊಂದಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಾನ್ಯತೆ ಹಾಗೂ ಪ್ರದರ್ಶನ ಕಂಡಿರುವ ‘ದ್ವಮ್ದ್ವ’ ಕನ್ನಡ ಕಲಾತ್ಮಕ ಚಲನಚಿತ್ರ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಹಾಗೂ ಪತ್ರಕರ್ತರಿಗೆ ವಿಶೇಷ ಪ್ರದರ್ಶನವನ್ನು ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು. ಬೆಂಕಿ ಬ್ಯಾಚ್‌ಮೇಟ್ಸ್ ಪ್ರೊಡಕ್ಷನ್ ಮತ್ತು ಕೋಣನೂರು ಪ್ರೊಡಕ್ಷನ್ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಸಿನೆಮಾ ನಿರ್ದೇಶಕ ಪೃಥ್ವಿ ಕೋಣನೂರು ‘ದ್ವಮ್ದ್ವ’ ಚಲನಚಿತ್ರವನ್ನು ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಗೊಳಿಸಿದರು. […]