ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ಈದ್ ಮಿಲಾದ್ ಆಚರಣೆ
ಉಡುಪಿ: ಪ್ರವಾದಿ ಮುಹಮ್ಮದ್ ಪೈಗಂಬರ್‌ರವರ ಜನ್ಮ ದಿನಾಚರಣೆ ಮಿಲಾದುನ್ನಬಿಯನ್ನು ಸೋಮವಾರ ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕಾಪು, ಉಚ್ಚಿಲ, ಮೂಳೂರು, ಪಡುಬಿದ್ರೆ, ಕಾರ್ಕಳ, ಶಿರ್ವ, ಕಟಪಾಡಿ, ನೇಜಾರು, ದೊಡ್ಡಣಗುಡ್ಡೆ, ಕುಂದಾಪುರ ಕೋಡಿ ಸೇರಿದಂತೆ ಹಲವು ಕಡೆಗಳಲ್ಲಿ ಈದ್ ಮಿಲಾದ್ ಮೆರವಣಿಗೆಯು ವಿಜೃಂಭಣೆಯಿಂದ ನಡೆಯಿತು. ಆಯಾ ಮಸೀದಿಗಳಿಂದ ಹೊರಟ ಮೆರವಣಿಗೆಯು ಪ್ರಮುಖ ಬೀದಿಗಳಲ್ಲಿ ಸಾಗಿ ವಾಪಾಸ್ಸು ಮಸೀದಿಗಳಿಗೆ ಆಗಮಿಸುವ ಮೂಲಕ ಸಮಾಪ್ತಿಗೊಂಡಿತು. ಮೆರವಣಿಗೆಯಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರ ಸಂದೇಶ ಸಾರುವ ಹಾಡು ಗಳು, ದಫ್ ಕುಣಿತ, ಸ್ಕೌಟ್ […]