ಚುನಾವಣೆಗೆ, ಸರ್ಕಾರಕ್ಕೆ ನಾವು ಯಾವುದೇ ಹಣ ಕೊಟ್ಟಿಲ್ಲ

ಉಡುಪಿ: ಅಬಕಾರಿ ಇಲಾಖೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್‌ ನ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗ್ಡೆ ತೀಕ್ಷ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಮಹಾರಾಷ್ಟ್ರ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಕರ್ನಾಟಕದ ಮದ್ಯ ಮಾರಾಟಗಾರರಿಂದ 700 ಕೋಟಿ ಲೂಟಿ ಹೊಡೆದಿದೆ ಎಂಬ ಆರೋಪದ ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆಗಾಗಿ ಸರ್ಕಾರಕ್ಕೆ ನಾವು ಯಾವುದೇ ಹಣ ಕೊಟ್ಟಿಲ್ಲ. ದಯವಿಟ್ಟು ಈ ವಿಚಾರವನ್ನು ಚುನಾವಣಾ ರಾಜಕೀಯಕ್ಕೆ ಬಳಸಿಕೊಳ್ಳಬೇಡಿ ಎಂದು ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ 25ನೇ […]