ಉಡುಪಿ:ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಬೇಕು :ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ
ಉಡುಪಿ: 14 ವರ್ಷದೊಳಗಿನ ಬಾಲ ಕಾರ್ಮಿಕರುಗಳು ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಮೀನು ಹೆಕ್ಕುವ ಕಾರ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಕಾರ್ಯಪಡೆಯ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಲ್ಪೆ ಬಂದರಿನಲ್ಲಿ ಬೆಳಗಿನ ಜಾವ ನಡೆಯುವ ಮೀನಿನ ಹರಾಜು ಕೇಂದ್ರಗಳಲ್ಲಿ […]