ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆಗೆ ರಾಜ್ಯ ಸರ್ಕಾರ ‘ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುವಂತೆ ಯಶ್ಪಾಲ್ ಸುವರ್ಣ ಆಗ್ರಹ.

ಉಡುಪಿ: ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ಪ್ರಾಕೃತಿಕ ವಿಕೋಪದ ಕಠಿಣ ಸಂದರ್ಭದಲ್ಲಿಯೂ ರಕ್ಷಣೆಗೆ ಧಾವಿಸುವ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಯವರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಅವರ ಈ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶೀರೂರು ಗುಡ್ಡ ಕುಸಿತದ ರಕ್ಷಣಾ ಕಾರ್ಯದಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತದ ಮನವಿಯ ಮೇರೆಗೆ ಕಾರ್ಯಾಚರಣೆಯಲ್ಲಿ […]