ಲೋಕಸೇವಾ ಆಯೋಗದ ಪರೀಕ್ಷೆಯನ್ನು ಪಾರದರ್ಶಕ ಹಾಗೂ ನ್ಯಾಯ ಸಮ್ಮತವಾಗಿ ನಡೆಸಿ :ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಕರ್ನಾಟಕ ಲೋಕಸೇವಾ ಆಯೋಗದವತಿಯಿಂದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ಆಗಸ್ಟ್ 27 ರಂದು ನಡೆಯುವ ಪೂರ್ವಭಾವಿ ಪರೀಕ್ಷೆಯಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಪಾರದರ್ಶಕ ಹಾಗೂ ನ್ಯಾಯ ಸಮ್ಮತವಾಗಿಪರೀಕ್ಷೆಯನ್ನು ನಡೆಸಲು ಮುಂದಾಗಬೇಕು ಎಂದುಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್ ಬಿ […]