ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಉಡುಪಿ: ಕ್ರೈಸ್ತ ಸಮುದಾಯದ ಪವಿತ್ರ ದಿನವಾದ ಶುಭ ಶುಕ್ರವಾರವನ್ನು (ಗುಡ್ ಫ್ರೈಡೆ) ಜಿಲ್ಲೆಯಾದ್ಯಂತ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು. ಧರ್ಮಪ್ರಾಂತ್ಯದ ಪ್ರಧಾನ ದೇವಾಲಯ ಮಿಲಾಗ್ರಿಸ್ ಕ್ಯಾಥೆಡ್ರಲ್ ಚರ್ಚ್ನಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ| ಜೆರಾಲ್ಡ್ ಐಸಾಕ್ ಲೋಬೊ ಪ್ರಾರ್ಥನಾ ವಿಧಿಯನ್ನು ನೆರವೇರಿಸಿದರು. ಚರ್ಚಿನ ಪ್ರಧಾನ ಧರ್ಮಗುರು ಹಾಗೂ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಸಹಾಯಕ ಧರ್ಮಗುರು ವಂ|ಪ್ರದೀಪ್ ಕಾರ್ಡೊಜಾ, ಪೋಪ್ ಅವರ ಭಾರತೀಯ ರಾಯಭಾರಿಗಳ ಕಾರ್ಯದರ್ಶಿ ವಂ|ಆಲ್ಬರ್ಟೋ ನಪ್ಲಿತಾನೋ ಹಾಗೂ ಬೊಲಿವಿಯಾ ರಾಯಭಾರಿಗಳ ಕಾರ್ಯದರ್ಶಿ […]