ಉಡುಪಿ: ಮಾಸ್ಕ್ ಹಾಕದ ಸರ್ಕಾರಿ ಬಸ್ ಕಂಡಕ್ಟರ್‌ಗೆ ದಂಡ ವಿಧಿಸಿದ ಜಿಲ್ಲಾಧಿಕಾರಿ ಜಿ. ಜಗದೀಶ್
ಉಡುಪಿ: ಮಾಸ್ಕ್ ಧರಿಸದಿದ್ದ ಸರ್ಕಾರಿ ಬಸ್ ಕಂಡಕ್ಟರ್ ಒಬ್ಬರಿಗೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಇಂದು ದಂಡ ವಿಧಿಸಿ, ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಗರದ ಕೋರ್ಟ್ ರಸ್ತೆಯ ಸಮೀಪ ನಡೆದಿದೆ. ಡಿಸಿಯವರು ಉಡುಪಿ ಜಿಲ್ಲಾ ನ್ಯಾಯಾಲಯದ ಅವರಣದಲ್ಲಿ ಇಂದು ನಡೆದ ಕೋವಿಡ್ ಜನಾಂದೋಲನ ಮಾಹಿತಿ ಕಾರ್ಯಕ್ರಮದ ನಂತರ, ಸಮೀಪದ ವಸತಿ ಸಂಕೀರ್ಣದ ಮನೆಗೆ “ನನ್ನ ಕುಟುಂಬ ನನ್ ಜವಾಬ್ದಾರಿ” ಅಭಿಯಾನ ಕಾರ್ಯಕ್ರಮದ ಸ್ಟಿಕರ್ ಅಳವಡಿಸಿ ಹೊರಬರುತ್ತಿದ್ದರು. ಈ ವೇಳೆ ರಸ್ತೆ ದಾಟುವಾಗ ಮುಂದೆ ಹಾದು […]