ಉಡುಪಿ: ಅನುಗ್ರಹ ಕಾಂಪ್ಲೆಕ್ಸ್ ನಲ್ಲಿ ಬೆಂಕಿ ಅವಘಡ; ಅಪಾರ ವಸ್ತುಗಳಿಗೆ ಹಾನಿ

ಉಡುಪಿ: ಉಡುಪಿ ನಗರದ ಮೈನ್ ಶಾಲೆಯ ಎದುರಿನ ಅನುಗ್ರಹ ಕಾಂಪ್ಲೆಕ್ಸ್ ನಲ್ಲಿ ಗುರುವಾರ ರಾತ್ರಿ 9 ಗಂಟೆಯ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅನಾಹುತ ಸಂಭವಿರುವ ಸಾಧ್ಯತೆ ಇದ್ದು, ಹಲವಾರು ವಸ್ತುಗಳಿಗೆ ಹಾನಿಯಾಗಿದೆ ಎನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಈ ದುರ್ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.