ಉಡುಪಿ: ನಾಳೆ 18 ವರ್ಷ ಮೇಲ್ಪಟ್ಟವರಿಗೆ ಪ್ರಥಮ ಡೋಸ್, 45 ವರ್ಷ ಮೇಲ್ಪಟ್ಟವರಿಗೆ ಎರಡನೆ ಡೋಸ್ ಲಸಿಕೆ

ಉಡುಪಿ: ನಾಳೆ (ಮೇ 11)ಯಿಂದ ಜಿಲ್ಲೆಯಲ್ಲಿ 18 ರಿಂದ 44 ವರ್ಷದೊಳಗಿನವರಿಗೆ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮ ನಾಲ್ಕು ಕೇಂದ್ರ ಗಳಲ್ಲಿ ಆರಂಭಗೊಳ್ಳಲಿದೆ. ಉಡುಪಿಯ ಜಿಲ್ಲಾಸ್ಪತ್ರೆ(ಸೈಂಟ್ ಸಿಸಿಲಿಸ್ ಶಾಲೆ), ಉಡುಪಿ ನಗರ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕುಂದಾಪುರ ತಾಲೂಕು ಆಸ್ಪತ್ರೆ ಹಾಗೂ ಕಾರ್ಕಳ ತಾಲೂಕು ಆಸ್ಪತ್ರೆಯಲ್ಲಿ ಮಧ್ಯಾಹ್ನ 2ಗಂಟೆಯಿಂದ ಲಸಿಕೆ ನೀಡುವ ಕಾರ್ಯ ಆರಂಭಗೊಳ್ಳಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ ಚಂದ್ರ ಸೂಡ ತಿಳಿಸಿದ್ದಾರೆ. ನೋಂದಣಿ ಕಡ್ಡಾಯ: ಈಗಾಗಲೇ ಕೋವಿನ್ […]