ಉಡುಪಿ: ಸಂಚಲನ ಸಂಸ್ಥೆಯ ವತಿಯಿಂದ ಜಿಲ್ಲಾಡಳಿತಕ್ಕೆ ಕೋವಿಡ್ ನಿರ್ವಹಣೆಗಾಗಿ ಉಚಿತ ಸೇವೆಯ ಆಂಬುಲೆನ್ಸ್ ಹಸ್ತಾಂತರ

ಉಡುಪಿ: ಸಂಚಲನ ಸ್ವಯಂ ಸೇವಾ ಸಂಘಟನೆ ಈಗಾಗಲೇ ಕಳೆದ 7 ವರ್ಷಗಳಿಂದ ಅನೇಕ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೆರಡು ವರ್ಷದಿಂದ ವಿಶೇಷವಾಗಿ ಯುವಕ-ಯುವತಿಯರಿಗೆ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ಉದ್ಯೋಗ ಮೇಳಗಳನ್ನು ಹಾಗೂ ಕೌಶಲ್ಯ ಅಭಿವೃದ್ದಿ ತರಬೇತಿಗಳನ್ನು ಆಯೋಜಿಸುತ್ತಿದೆ. ಇದಲ್ಲದೇ ಪ್ರತಿ ವರ್ಷ ಕಾರ್ಗಿಲ್ ವಿಜಯ ದಿವಸದ ನೆನಪಿನಾರ್ಥ 527 ಗಿಡಗಳನ್ನು ಪ್ರಮುಖ ಸ್ಥಳಗಳಲ್ಲಿ ನೆಡುವುದು, ವಿಕಲಚೇತನರಿಗೆ ಸಹಾಯ ಮಾಡುವುದು, ರಕ್ತ ದಾನ ಶಿಬಿರವನ್ನು ಆಯೋಜಿಸುವುದು ಹೀಗೆ ಹತ್ತಾರು ಪ್ರಕಲ್ಪಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದೆ. […]