ಉಡುಪಿ: ಕೊರೊನಾದಿಂದ ಮೃತಪಟ್ಟ ಮಹಿಳೆಯ ಅಂತ್ಯಕ್ರಿಯೆಯಲ್ಲಿ ಸೌಹಾರ್ದತೆ
ಉಡುಪಿ: ಕೊರೊನಾದಿಂದ ಮೃತಪಟ್ಟ ಕ್ರಿಶ್ಚಿಯನ್ ಮಹಿಳೆಯೊಬ್ಬರ ಅಂತ್ಯಕ್ರಿಯೆಯನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್, ಮೊಗವೀರ ಯುವ ಸಂಘಟನೆ ಮತ್ತು ಪಾಪ್ಯುಲರ್ ಫ್ರಾಂಟ್ ಆಫ್ ಇಂಡಿಯಾ ಕಾರ್ಯಕರ್ತರು ನೆರವೇರಿಸುವ ಮೂಲಕ ಸೌಹಾರ್ದತೆ ಮೆರೆದಿದ್ದಾರೆ. ಬಳ್ಳಾರಿಯ ಕ್ರಿಶ್ಚಿಯನ್ ಸಮುದಾಯದ ಮಹಿಳೆಯೊಬ್ಬರು ಆಗಸ್ಟ್ 29 ರಂದು ಮೃತಪಟ್ಟಿದ್ದರು. ಮಣಿಪಾಲ ಆಸ್ಪತ್ರೆಯಲ್ಲಿ ಕಳೆದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಚಿಕಿತ್ಸೆಗೆ ತಮ್ಮಲ್ಲಿದ್ದ ಹಣವನ್ನೆಲ್ಲವನ್ನು ಖರ್ಚು ಮಾಡಿದ್ದು, ಕೊನೆಗೆ ತಾಯಿಯ ಮೃತ ದೇಹವನ್ನು ತಮ್ಮ ಹುಟ್ಟೂರಿಗೆ ಒಯ್ಯಲು ಅಥವಾ ಇಲ್ಲಿಯೇ ಅಂತ್ಯ ಕ್ರಿಯೆ […]