ಉಡುಪಿ: ಜಿ. ಶಂಕರ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ: ₹ 50 ಸಾವಿರ ವಿಮೆ ಸೌಲಭ್ಯ
ಉಡುಪಿ: ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಹಾಗೂ ಮಣಿಪಾಲ ಸಿಗ್ಮಾ ಹೆಲ್ತ್ ಇನ್ಸೂರೆನ್ಸ್ ಕಂಪೆನಿ ಹಾಗೂ ಮಾಹೆ ಮಣಿಪಾಲ ಸಹಯೋಗದಲ್ಲಿ ₹ 50 ಸಾವಿರದವರೆಗಿನ ಜಿ.ಶಂಕರ್ ಆರೋಗ್ಯ ಸುರಕ್ಷಾ ಕಾರ್ಡ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಯೋಜನೆಯ ಲಾಭಗಳೇನು.? ಮಣಿಪಾಲ ಕೆಎಂಸಿ ಆಸ್ಪತ್ರೆಯ ಹೊರ ರೋಗಿ ವಿಭಾಗದ ವೈದ್ಯಕೀಯ ಚಿಕಿತ್ಸೆಯಲ್ಲಿ ಶೇ.70, ಉಡುಪಿ ಟಿಎಂಎ ಪೈ ಆಸ್ಪತ್ರೆ ಹೊರ ರೋಗಿ ವಿಭಾಗದ ವೈದ್ಯಕೀಯ ಚಿಕಿತ್ಸೆಯಲ್ಲಿ ಶೇ.60 ಹಾಗೂ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ಹೊರ ರೋಗಿ ವಿಭಾಗದ ವೈದ್ಯಕೀಯ ಚಿಕಿತ್ಸೆಯಲ್ಲಿ […]