ಉಡುಪಿ:ಮಹಾತ್ಮ ಗಾಂಧೀಜಿಯವರ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಮಹಾತ್ಮಾ ಗಾಂಧೀಜಿಯವರ ಸತ್ಯ, ಶಾಂತಿ, ಅಹಿಂಸಾ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು, ಗಾಂಧೀಜಿಯವರಿಗೆ ಗೌರವ ಸಲ್ಲಿಸುವ ಮೂಲಕ ಗಾಂಧಿ ಜಯಂತಿ ದಿನಾಚರಣೆಯನ್ನು ಅರ್ಥಪೂರ್ಣವಾಗಿಸೋಣ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ಉಡುಪಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಉಡುಪಿ ಜಿಲ್ಲಾಸಹಕಾರಿ ಯೂನಿಯನ್ & ಉಡುಪಿ ಜಿಲ್ಲಾ […]