ಗೀತಾ ಜಯಂತಿ ಅಂಗವಾಗಿ ಉಡುಪಿ ಕೃಷ್ಣಮಠದಲ್ಲಿ ವಿಶೇಷ ಪೂಜೆ, ರಥೋತ್ಸವ

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಗೀತಾ ಮಹೋತ್ಸವದ ಗೀತಾ ಜಯಂತಿ ಅಂಗವಾಗಿ ಪರ್ಯಾಯ ಪುತ್ತಿಗೆ ಮಠದ ಕಿರಿಯ ಶ್ರೀಗಳಾದ ಸುಶ್ರೀಂದ್ರತೀರ್ಥ ಶ್ರೀಪಾದರು ಕೃಷ್ಣನಿಗೆ ಗೀತಾಮೃತಮಹೋದಧಿ ಅಲಂಕಾರವನ್ನು ಮಾಡಿದರು. ನಂತರ ಪರ್ಯಾಯ ಪೀಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು‌. ಗೀತಾ ಜಯಂತಿಯ ಅಂಗವಾಗಿ ರಥಬೀದಿಯಲ್ಲಿ ಚಿನ್ನದ ರಥದಲ್ಲಿ ಗೀತಾ ಪುಸ್ತಕವನ್ನಿಟ್ಟು ಭಕ್ತರನ್ನೊಳಗೊಂಡು ಅತ್ಯಂತ ವೈಭವದಿಂದ ರಥೋತ್ಸವ ಜರುಗಿತು. ಕಾರ್ಯಕ್ರಮವನ್ನು ನವದೆಹಲಿಯ ಸ್ವಾಮಿ ನಾರಾಯಣ ರಿಸರ್ಚ್ ಇನ್ ಸ್ಟಿಟ್ಯೂಟ್ ಮಹಾಮಹೋಪಾಧ್ಯಾಯ ಸಾಧು ಶ್ರೀ ಭದ್ರೇಶದಾಸ್‌ ಉದ್ಘಾಟಿಸಿದರು. […]