ಉಡುಪಿ:ಲಿಂಗ ಅಸಮಾನತೆಯನ್ನು ಹೋಗಲಾಡಿಸುವುದೇ ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಓದಿಸಿ ಕಾರ್ಯಕ್ರಮದ ಉದ್ದೇಶ : ಸಂಸದ ಕೋಟಾ ಶ್ರೀನಿವಾಸ ಪೂಜಾರಿ

ಉಡುಪಿ: ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇರುವ ಅಸಮಾನತೆಯನ್ನು ಹೋಗಲಾಡಿಸುವ ಉದ್ಧೇಶದಿಂದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಇದು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಕರೆ ನೀಡಿದರು. ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಪಂಚಾಯತ್ ಡಾ. ವಿ.ಎಸ್. ಆಚಾರ್ಯ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು […]