ಉಡುಪಿ:ಪೌರ ಕಾರ್ಮಿಕರ ಆರೋಗ್ಯ ತಪಾಸಣಾ ಕಾರ್ಯಕ್ರಮ
ಉಡುಪಿ: ಉಡುಪಿ ನಗರಸಭೆ ವತಿಯಿಂದ ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತೆ ಎಂಬ ಧ್ಯೇಯ ವಾಕ್ಯದೊಂದಿಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ಹಾಗೂ ಪೌರಕಾರ್ಮಿಕರ ಸಾಮಾನ್ಯ ಆರೋಗ್ಯ ತಪಾಸಣಾ ಕಾರ್ಯಕ್ರಮವು ಮಂಗಳವಾರ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ನಡೆಯಿತು. ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ್ ಮಾತನಾಡಿ, ಪೌರಕಾರ್ಮಿಕರು ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುತ್ತಿರುವ ಹಿನ್ನೆಲೆ, ಇಂದು ನಮ್ಮೆಲ್ಲರ ಆರೋಗ್ಯ ಉತ್ತಮವಾಗಿದೆ. ಅವರ ಆರೋಗ್ಯವನ್ನು ಕಾಪಾಡುವ ಸಲುವಾಗಿ ಆರೋಗ್ಯ ತಪಾಸಣೆಯನ್ನು ಮಾಡಿಸಲಾಗುತ್ತಿದೆ. […]