ಉಡುಪಿ: ಅಂಗಡಿ ಮಾಲೀಕರು ಸ್ವಚ್ಛತೆ ಕಾಪಾಡದಿದ್ದಲ್ಲಿ ಹಾಗೂ ನಿಷೇಧಿತ ಪ್ಲಾಸ್ಟಿಕ್ ಬಳಸಿದ್ದಲ್ಲಿ ಉದ್ದಿಮೆ ಪರವಾನಿಗೆ ರದ್ದು.

ಉಡುಪಿ: ಮಳೆಗಾಲದಲ್ಲಿ ಸಾಮಾನ್ಯವಾಗಿ ಬಾಧಿಸುವ ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯಾದಂತಹ ಸಾಂಕ್ರಮಿಕ ರೋಗಗಳ ಬಗ್ಗೆ ಎಚ್ಚರ ವಹಿಸಿ ಮುಂಜಾಗೃತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಹಾಗೂ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ ಉದ್ದೇಶದಿಂದ ನಗರಸಭೆ ನಿರಂತರ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ನಗರಸಭೆ ವತಿಯಿಂದ ಸರ್ವೆಗಳನ್ನು ನಡೆಸಲಾಗುತ್ತಿದ್ದು, ಕಳೆದೆರಡು ದಿನಗಳಲ್ಲಿ ನಡೆಸಿದ ಸರ್ವೆಯಲ್ಲಿ ಅಂಗಡಿಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಯ್ದುಕೊಳ್ಳದೇ ಇದ್ದ 9 ಅಂಗಡಿಗಳ ಮಾಲೀಕರಿಗೆ ಒಟ್ಟು 8,300 ರೂ. ಹಾಗೂ ನಗರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ […]