Tag: #Udupi #girl’s #loss
-
ಉಡುಪಿ: ಬಾಲಕಿ ನಾಪತ್ತೆ
ಉಡುಪಿ: ನಗರದ ಹನುಮಂತನಗರ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ, ನಿಟ್ಟೂರು ಸರಕಾರಿ ಬಾಲಕಿಯರ ಬಾಲಮಂದಿರದಲ್ಲಿ ವಾಸವಿದ್ದ ಚೈತ್ರಾ ಆಲಿಯಾಸ್ ಸುಚಿತ್ರಾ (17) ಎಂಬ ಯುವತಿಯು 2019 ಮೇ 17 ರಿಂದ ನಾಪತ್ತೆಯಾಗಿರುತ್ತಾರೆ. 166 ಸೆಂ.ಮೀ. ಎತ್ತರ, ಕೋಲು ಮುಖ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೋಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೋಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.