ಉಡುಪಿ:ಸರಕಾರದ ಸೌಲಭ್ಯಗಳನ್ನು ಲಿಂಗತ್ವ ಅಲ್ಪಸಂಖ್ಯಾತರಿಗೆ ತಲುಪಿಸಿ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಸರಕಾರ ಲಿಂಗತ್ವ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅವರುಗಳಿಗೆ ಈ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಅವರುಗಳನ್ನು ಇದರ ಫಲಾನುಭವಿಗಳನ್ನಾಗಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಜಿಲ್ಲೆಯಲ್ಲಿ ಇರುವ ಲಿಂಗತ್ವ ಅಲ್ಪಸಂಖ್ಯಾತರು ಸರಕಾರ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಲಾಭ ಪಡೆಯುವುದರೊಂದಿಗೆ ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ […]