ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೆ, ಶೀಘ್ರದಲ್ಲಿಯೇ ಅನುದಾನ ಬಿಡುಗಡೆ: ಬಸವರಾಜ್ ಬೊಮ್ಮಾಯಿ
ಉಡುಪಿ: ಜಿಲ್ಲಾ ಆಸ್ಪತ್ರೆಯನ್ನು ಶೀಘ್ರದಲ್ಲಿಯೇ ಮೇಲ್ದರ್ಜೆಗೇರಿಸಿ 300 ಬೆಡ್‌ಗಳ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಗರದ ಕಂಟ್ರಿ ಹೋಟೆಲ್‌ನ ಸಭಾಂಗಣದಲ್ಲಿ ಜಿಲ್ಲಾಡಳಿತಕ್ಕೆ ವೆಂಟಿಲೇಟರ್ ಹಸ್ತಾಂತರಿಸುವ ಕಾರ‍್ಯಕ್ರಮದಲ್ಲಿ ವೆಂಟಿಲೇಟರ್‌ಗಳನ್ನು ಹಸ್ತಾಂತರಿಸಿ ಮಾತನಾಡಿದರು. ಉಡುಪಿಯ ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಗಳು ಅನುಮೋದನೆಯನ್ನು ನೀಡಿದ್ದಾರೆ. ಈ ಕಾರ‍್ಯಕ್ಕೆ ಅನುದಾನವು ಹಣಕಾಸು ಇಲಾಖೆಯಿಂದ ಶೀಘ್ರದಲ್ಲಿಯೇ ಬಿಡುಗಡೆಯಾಗಲಿದ್ದು, ಮೇಲ್ದರ್ಜೆಗೇರಿಸಿ ಶೀಘ್ರದಲ್ಲಿ ಕಾರ‍್ಯ ಪ್ರಾರಂಭವಾಗಲಿದೆ ಎಂದರು. ಕೊರೋನಾ ಸೋಂಕು ಹೊಂದಿ ಉಸಿರಾಟದ […]