ಉಡುಪಿ:ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ

udupixpress

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟವು ಮಾರ್ಚ್ 14 ಮತ್ತು 15 ರಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ರೀಡಾಕೂಟವು ಮಾರ್ಚ್ 14 ರಂದು ಬೆಳಗ್ಗೆ 9 ಗಂಟೆಗೆ ಪ್ರಾರಂಭವಾಗುವುದು. ಕ್ರೀಡಾಕೂಟದಲ್ಲಿ ಭಾಗವಹಿಸುವ ಸರಕಾರಿ ನೌಕರರು ನಿಗದಿತ ನಮೂನೆಯಲ್ಲಿ ಮಾರ್ಚ್ 10 ರೊಳಗಾಗಿ ಸಹಾಯಕ ನಿದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಇವರಿಗೆ ಕಳುಹಿಸಬೇಕು. […]