ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿಯೇ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ಮಾರ್ಚ್ ತಿಂಗಳಿಗೆ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದರು. ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ […]