ಗೃಹಲಕ್ಷ್ಮಿ ಯೋಜನೆಗೆ ಹಣ ಹೊಂದಿಸಲು ರಾಜ್ಯ ಸರಕಾರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಹುನ್ನಾರ: ಸಂಸದ ಕೋಟ ಶ್ರೀನಿವಾಸ ಪೂಜಾರಿ
ಚಿಕ್ಕಮಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಗೃಹಲಕ್ಷ್ಮಿ ಯೋಜನೆಗೆ ಹಣವನ್ನು ಹೊಂದಿಸಲು ಸಾಧ್ಯವಾಗದೆ ಪರದಾಡುತ್ತಿದೆ. ಇದಕ್ಕಾಗಿ ಬಿಪಿಎಲ್ ಕಾರ್ಡ್‍ಗಳನ್ನು ರದ್ದುಗೊಳಿಸುವ ಹುನ್ನಾರ ನಡೆಸಿದೆ. ಬಿಜೆಪಿ ಕಾರ್ಯಕರ್ತರು ಇದನ್ನು ಪ್ರತಿಭಟಿಸಿ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದ್ದಾರೆ. ಶನಿವಾರ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಸಂಬಂಧ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 50,000 ಬಿಪಿಎಲ್ ಕಾರ್ಡುಗಳು ರದ್ದಾಗುವ ಸಾಧ್ಯತೆಗಳಿವೆ. ಈ ಸಂಬಂಧ ರಾಜ್ಯ […]