ಉಡುಪಿ:ಗೃಹ ರಕ್ಷಕ ದಳದವರ ಉತ್ತಮ ಕಾರ್ಯಕ್ಕೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಶ್ಲಾಘನೆ

ಉಡುಪಿ: ತುರ್ತು ಸಂದರ್ಭ, ಪ್ರಾಕೃತಿಕ ವಿಕೋಪ ಸೇರಿದಂತೆ ಪೊಲೀಸ್ ಇಲಾಖೆಯ ಜೊತೆಯಲ್ಲಿ ಆಂತರಿಕ ಭದ್ರತಾ ಕಾರ್ಯಗಳನ್ನು ಗೃಹ ರಕ್ಷಕ ದಳದವರು ಉತ್ತಮವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಶ್ಲಾಘಿಸಿದರು. ಅವರು ಇಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ಉಡುಪಿ ಜಿಲ್ಲೆ ಇವರ ವತಿಯಿಂದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಪೊಲೀಸ್ ಸಿಬ್ಬಂದಿಗಳ ಕೊರತೆ ಅಥವಾ ಸಂಕಷ್ಟ ಸಂದರ್ಭದಲ್ಲಿ ಜಿಲ್ಲಾಡಳಿತದ ಜೊತೆ […]