ಉಡುಪಿ:ಜಿಟಿಟಿಸಿಯಲ್ಲಿ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಉಡುಪಿ ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ತಾಂತ್ರಿಕ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿ.ಟಿ.ಟಿ.ಸಿ ಕೇಂದ್ರದಲ್ಲಿ 3+1 ವರ್ಷದ ಡಿಪ್ಲೋಮಾ ಇನ್ ಟೂಲ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ ಮತ್ತುಡಿಪ್ಲೋಮಾ ಇನ್ ಪ್ರಿಸಿಶನ್ ಮ್ಯಾನುಪ್ಯಾಕ್ಚರಿಂಗ್ ಕೋರ್ಸ್ಗಳು ಲಭ್ಯವಿದ್ದು, ಐ.ಟಿ.ಐ ಮತ್ತು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿಉತ್ತೀರ್ಣರಾದ ವಿದ್ಯಾರ್ಥಿಗಳು ನೇರವಾಗಿ ಎರಡನೇ ವರ್ಷದ ಡಿಪ್ಲೋಮಾ ಕೋರ್ಸ್ಗೆ ಪ್ರವೇಶ ಪಡೆಯಬಹುದಾಗಿದೆ. […]