ಉಡುಪಿ:ಅತಿಥಿ ಶಿಕ್ಷಕರ ಹುದ್ದೆ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆಗಳಲ್ಲಿ ಪ್ರಸಕ್ತ ಸಾಲಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ ಮೂಲಕ ಹುದ್ದೆಗಳನ್ನು ಭರ್ತಿ ಮಾಡುವವರೆಗೆ ಅಥವಾ ಖಾಯಂ ಶಿಕ್ಷಕರು/ ಉಪನ್ಯಾಸಕರು ವರ್ಗಾವಣೆ/ ನಿಯೋಜನೆ ಆದೇಶದ ಮೇರೆಗೆ ಹಾಜರಾಗುವವರೆಗೂ ಅಥವಾ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದೂ ಮೊದಲೋ ಅಲ್ಲಿಯವರೆಗೆ ತಾತ್ಕಾಲಿಕವಾಗಿ ಅರ್ಹ ಅತಿಥಿ ಶಿಕ್ಷಕರು / ಉಪನ್ಯಾಸಕರಿಂದ ಈ […]

ಅತಿಥಿ ಉಪನ್ಯಾಸಕರ ಹುದ್ದೆ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್,ಉಡುಪಿ ಮೊ.ನಂ:8073213310 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.