ಗುಜ್ಜರಬೆಟ್ಟು ಕಡಲ್ಕೊರೆತ ಪ್ರದೇಶಕ್ಕೆ ಅಧಿಕಾರಿಗಳೊಡನೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

ಉಡುಪಿ: ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಜ್ಜರಬೆಟ್ಟು ಪ್ರದೇಶದಲ್ಲಿ ಕಡಲ್ಕೊರೆತ ಪೀಡಿತ ಭಾಗಗಳಿಗೆ ಅಧಿಕಾರಿಗಳೊಂದಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಡಲ್ಕೊರೆತ ಪ್ರದೇಶದಲ್ಲಿ ಈಗಾಗಲೇ ಹಲವು ತೆಂಗಿನ ಮರಗಳು ಕೊಚ್ಚಿ ಹೋಗಿದ್ದು, ಹಲವು ಮನೆಗಳು ಹಾಗೂ ಲಕ್ಷ್ಮೀ ನಾರಾಯಣ ಭಜನ ಮಂದಿರದ ಬಳಿಯ ತಡೆಗೋಡೆ ಸಮುದ್ರ ಪಾಲಾಗುವ ಸಂಭವವಿದ್ದು ತಕ್ಷಣ ತುರ್ತು ಕಾಮಗಾರಿಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ಥಳದಲ್ಲೇ ಮೀನುಗಾರಿಕೆ ಸಚಿವರಾದ ಶ್ರೀ ಮಾಂಕಾಳ ವೈದ್ಯರಿಗೆ ದೂರವಾಣಿ ಕರೆ […]