ಮಳೆಯಿಂದ ಉಡುಪಿ ಜಿಲ್ಲೆಯಲ್ಲಿ 55 ಕೋಟಿ ರೂ. ನಷ್ಟ

ಉಡುಪಿ: ಕಳೆದ ಹಲವು ದಿನಗಳಿಂದ ಸುರಿದ ಭಾರೀ ಮಳೆಯಿಂದ ಉಡುಪಿ ಜಿಲ್ಲೆಯಲ್ಲಿ 55 ಕೋಟಿ ರೂ. ನಷ್ಟ ಉಂಟಾಗಿದೆ‌. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು ಕಡಲ್ಕೊರೆತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕೆಮ್ಮಣ್ಣು ಗ್ರಾ.ಪಂ. ವ್ಯಾಪ್ತಿಯ ಗುಜ್ಜರಬೆಟ್ಟು ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ, ಸ್ಥಳೀಯರೊಂದಿಗೆ ಚರ್ಚಿಸಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಇಂದು ಸಂಜೆಯವರೆಗೂ ಮಳೆಯಿಂದ ಹಾನಿಯಾದ ವಿವಿಧ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ. ಉಡುಪಿಯಲ್ಲಿ ಇದ್ದು ನೆರೆಹಾನಿ ನೋಡುವಂತೆ […]