ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಲಲಿತ ಇಂಜಿನಿಯರ್ಸ್ನಲ್ಲಿ ಸೂಪರ್‌ವೈಸರ್ ಮತ್ತು ಎಲೆಕ್ಟ್ರಿಶಿಯನ್ ಆಗಿ ಕೆಲಸ ಮಾಡಿಕೊಂಡಿದ್ದ, ಪ್ರಶಾಂತ ದುರ್ಗ ನಾಯ್ಕ (38) ಎಂಬ ವ್ಯಕ್ತಿಯು ಮೇ 17 ರಿಂದ ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 6 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.