ವಿದ್ಯಾರ್ಥಿಗಳು ಶೈಕ್ಷಣಿಕ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ: ಹಾಕಪ್ಪ ಆರ್. ಲಮಾಣಿ

ಉಡುಪಿ: ಸರಕಾರವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್ ಲಮಾಣಿ ಹೇಳಿದರು.ಅವರು ಶುಕ್ರವಾರ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆದ 2023-24 ನೇ ಸಾಲಿನಲ್ಲಿ ಉಡುಪಿ ತಾಲೂಕು ಸಂಬಂಧಿಸಿದ ವಿದ್ಯಾರ್ಥಿನಿಲಯಗಳಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ವ್ಯಾಸಾಂಗ ಮಾಡಿ ಶೇ. 90 ಕ್ಕೂ ಮೇಲ್ಪಟ್ಟು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. […]