ವಚನಗಳ ಸಂಗ್ರಹಣೆಯಲ್ಲಿ ಡಾ.ಫ.ಗು.ಹಳಕಟ್ಟಿಯವರ ಕೊಡುಗೆ ಅಪಾರ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್
ಉಡುಪಿ: ಶರಣರ ವಚನಗಳನ್ನು ಸಂಗ್ರಹಿಸಿ, ತಮ್ಮ ಜೀವನವನ್ನೇ ಬಸವಾದಿ ಶರಣರ ವಚನಗಳನ್ನು ಪ್ರಚಾರ ಮಾಡಲು ಮುಡಿಪಾಗಿಟ್ಟು, ವಚನಗಳ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸಿದ ವಚನ ಸಂಶೋಧನಾ ಪಿತಾಮಹ ಡಾ.ಫ.ಗು.ಹಳಕಟ್ಟಿಯವರ ಜನ್ಮ ದಿನವನ್ನು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ವಚನ ಸಂರಕ್ಷಣೆಯಲ್ಲಿ ಅವರ ಕೊಡುಗೆ ಅಪಾರ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ […]